ಮಾ.1: ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
Update: 2019-02-27 21:22 IST
ಉಡುಪಿ, ಫೆ.27: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬೂತ್ ಅಧ್ಯಕ್ಷರು, ಬಿಎಲ್‌ಎ ಹಾಗೂ ಸರ್ವ ಕಾರ್ಯಕರ್ತರ ಸಭೆಯು ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅಧ್ಯಕ್ಷತೆಯಲ್ಲಿ ಮಾ.1ರ ಅಪರಾಹ್ನ 3:30ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಜನಾರ್ದನ ಭಂಡಾರ್ಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.