ಸಾಮಾಜಿಕ ಮಾಧ್ಯಮಗಳಲ್ಲಿನ ವದಂತಿ ಬಗ್ಗೆ ಎಚ್ಚರ: ಸಿಬಿಎಸ್‌ಇ ಸಲಹೆ

Update: 2019-02-27 15:57 GMT

ಹೊಸದಿಲ್ಲಿ, ಫೆ.27: ಮುಂಬರುವ ಪರೀಕ್ಷೆಯ ಸಂದರ್ಭ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ವದಂತಿಯ ಬಗ್ಗೆ ಕಿವಿಗೊಡಬೇಡಿ ಎಂದು ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಲಹೆ ನೀಡಿದೆ.

ಈ ಹಿಂದೆ ಕೆಲವು ಕಿಡಿಗೇಡಿಗಳು ಯೂಟ್ಯೂಬ್, ಫೇಸ್‌ಬುಕ್, ಟ್ವಿಟರ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ನಕಲಿ ವೀಡಿಯೊ ಹಾಗೂ ಸಂದೇಶಗಳನ್ನು ಪ್ರಸಾರ ಮಾಡಿರುವುದು ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಲ್ಲಿ , ಪೋಷಕರಲ್ಲಿ, ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಮೂಡಿಸುವುದು ಇದರ ಉದ್ದೇಶವಾಗಿದೆ.

ಇಂತಹ ಕೃತ್ಯ ನಡೆಸದಂತೆ ಎಚ್ಚರಿಕೆ ಮತ್ತು ಸಲಹೆ ನೀಡಲಾಗಿದೆ. ಗೊಂದಲ ಮೂಡಿಸುವ ಕಿಡಿಗೇಡಿಗಳ ಪ್ರಯತ್ನ ಗಮನಕ್ಕೆ ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಬಿಎಸ್‌ಇ ಎಚ್ಚರಿಕೆ ನೀಡಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್‌ಇ) 12ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಆರಂಭವಾಗಿದ್ದು ಎಪ್ರಿಲ್ 3ರವರೆಗೆ ನಡೆಯಲಿದ್ದರೆ 10ನೇ ತರಗತಿ ಪರೀಕ್ಷೆ ಫೆ.21ರಂದು ಆರಂಭವಾಗಿ ಮಾರ್ಚ್ 29ರವರೆಗೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News