ವಿಜ್ಞಾನ ರಸಪ್ರಶ್ನೆ ಸ್ಪರ್ಧೆ; ಚಂದನ ವಾಹಿನಿಯಲ್ಲಿ ಪ್ರಸಾರ
ಉಡುಪಿ, ಫೆ.27:ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ವಿಜ್ಞಾನಿಗಳನ್ನು ರೂಪಿಸುವ ಆಶಯದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಇವರುಗಳ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದೂರದರ್ಶನ ಚಂದನ ವಾಹಿನಿಯಲ್ಲಿ ಸರ್ ಸಿ.ವಿ.ರಾಮನ್ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸರ್ ಸಿ. ವಿ. ರಾಮನ್ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಚಂದನ ವಾಹಿನಿಯ ಥಟ್ ಅಂತಾ ಹೇಳಿ ಕಾರ್ಯಕ್ರಮ ಅಡಿಯಲ್ಲಿ ಚಿತ್ರೀಕರಿಸಲಾಗಿದ್ದು, ಫೆ.28ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ರಿಂದ 10ರವರೆಗೆ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಅಲ್ಲದೇ ಇದು ಮರುದಿನ ಅಪರಾಹ್ನ 12:30ರಿಂದ 1 ಗಂಟೆಯವೆಗೆ ಮರುಪ್ರಸಾರಗೊಳ್ಳಲಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದರ ಸದುಪ ಯೋಗ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.