ರಾಜ್ಯ ಸರಕಾರಗಳು ಎಚ್ಚರಿಕೆಯಿಂದ ಇರಬೇಕು: ಕುಮಾರಸ್ವಾಮಿ ಕರೆ
ಮಂಡ್ಯ, ಫೆ.27: ದೇಶದ ಯೋಧರ ಹತ್ಯೆಗೆ ದೇಶದ ರಕ್ಷಣಾ ಇಲಾಖೆ ಪ್ರತೀಕಾರ ತೆಗೆದುಕೊಂಡಿದೆ. ಇದು ಎರಡು ದೇಶದ ಸಂಘರ್ಷದ ದಾರಿ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯ ಸರಕಾರಗಳು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಉಗ್ರರ ನೆಲೆಗಳ ಮೇಲೆ ನಡೆದ ದಾಳಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಸೆನ್ಸಿಟಿವ್ ವಿಚಾರ. ಭದ್ರತಾ ದೃಷ್ಟಿಯಿಂದ ಕರಾವಳಿ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಎಚ್ಚರಿಕೆಯಿಂದ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಮ್ಮ ರಾಜ್ಯದ ಅಧಿಕಾರಿಗಳಿಗೆ ಹೈ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದೇನೆ ಎಂದರು.
ದೇಶದಲ್ಲಿ ಕ್ಲಿಷ್ಟಕರ ಪರಿಸ್ಥಿತಿ ಇರುವುದರಿಂದ ನಾವೆಲ್ಲ ಎಚ್ಚರಿಕೆಯಿಂದ ಇರಬೇಕು. ಸರಕಾರದಿಂದ ಪೊಲೀಸ್ ಇಲಾಖೆ, ಇಂಟಲಿಜೆನ್ಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದ್ದೇನೆ. ಏರ್ ಸರ್ಜಿಕಲ್ ಸ್ಟ್ರೈಕ್‍ಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇಂತಹ ವಿಚಾರಗಳಲ್ಲಿ ಸಂಯಮದಿಂದ ವರ್ತಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕೆಂದು ಮನವಿ ಮಾಡಿದರು.