ಮಾ.17ಕ್ಕೆ ಪ್ರಜಾಪ್ರಭುತ್ವದ ಬಿಕ್ಕಟ್ಟು ಕುರಿತ ವಿಚಾರ ಸಂಕಿರಣ

Update: 2019-02-27 16:08 GMT

ಬೆಂಗಳೂರು, ಫೆ.27: ಸಿಟಿಜನ್ಸ್ ಫಾರ್ ಡೆಮಾಕ್ರಸಿ, ಜನಾಂದೋಲನಗಳ ಮಹಾ ಮೈತ್ರಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಮಾ.17 ರಂದು ಧಾರವಾಡದ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ‘ಪ್ರಜಾಪ್ರಭುತ್ವದ ಬಿಕ್ಕಟ್ಟು’ ಮೂಲ ಕಾರಣಗಳು ಮತ್ತು ಪರಿಹಾರದ ಸಾಧ್ಯತೆಗಳು ಕುರಿತು ವಿಚಾರ ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಮೈತ್ರಿ ಸಂಘಟನೆಯ ಮುಖಂಡ ಎಸ್.ಆರ್.ಹೀರೇಮಠ್, ಪ್ರಸ್ತುತ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಗಂಡಾಂತರ ಸ್ಥಿತಿ ತಲುಪಿದೆ. ಪ್ರಜಾಪ್ರಭುತ್ವ ಇಂದು ಎದುರಿಸುತ್ತಿರುವ ಬಿಕ್ಕಟ್ಟಿಗೆ ಮೂಲ ಕಾರಣಗಳೇನು. ಈ ಬಿಕ್ಕಟ್ಟಿನಿಂದ ಹೊರ ಬರುವ ಸಾಧ್ಯತೆಗಳು ಯಾವುವು ಎಂದು ವಿಚಾರ ಮಂಥನದಲ್ಲಿ ವಿಚಾರವಾದಿಗಳು ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಎ.ಪಿ. ಶಾಹ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ್‌ಕೃಷ್ಣ, ಸಾಹಿತಿ ದೇವನೂರ ಮಹಾದೇವ, ಪತ್ರಕರ್ತ ಸುಗತ ಶ್ರೀನಿವಾಸರಾಜು, ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಸೇರಿದಂತೆ ಹಲವಾರು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News