ಪಕ್ಷದ ಸಭೆ-ಸಮಾರಂಭಗಳಲ್ಲಿ ಹಾರ-ತುರಾಯಿ ನಿಷೇಧ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2019-02-27 21:50 IST
ವಿಜಯಪುರ, ಫೆ. 27: ಕಾಂಗ್ರೆಸ್ ಪಕ್ಷದ ಸಭೆ, ಸಮಾರಂಭಗಳಲ್ಲಿ ಇನ್ನುಮುಂದೆ ಹಾರ, ತುರಾಯಿ ಸ್ವೀಕರಿಸದಿರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ವಿಜಯಪುರದಲ್ಲಿ ಹುತಾತ್ಮ ಯೋಧರಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಹಾರ, ತುರಾಯಿ ನೀಡುವುದು, ಅದನ್ನು ಸ್ವೀಕಾರ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಮುಂದೆ ಪಕ್ಷದ ಸಮಾವೇಶಗಳಲ್ಲಿ ಸನ್ಮಾನ, ಹಾರ, ತುರಾಯಿ ನಿಷೇಧ ಮಾಡುವಂತೆ ಸಿದ್ದರಾಮಯ್ಯ ಅವರು ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಸೂಚಿಸಿದ್ದಾರೆ.