×
Ad

ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ: ಹೂವಿನ ಅಂಗಡಿ ಸುಟ್ಟು ಭಸ್ಮ

Update: 2019-02-27 22:41 IST

ಮೈಸೂರು,ಫೆ.27: ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಬೆಂಕಿ ಅವಘಡದಿಂದ ಹೂವಿನ ಅಂಗಡಿ ಸುಟ್ಟು ಭಸ್ಮ.ವಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೂವಿನ ಅಂಗಡಿಯಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಅಕ್ಕಪಕ್ಕದ ಅಂಗಡಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಇಂದು ಬೆಳಿಗ್ಗೆ 7 ಗಂಟೆ ಸುಮಯದಲ್ಲಿ ಬೆಂಕಿ ಅವಘ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸುಮಾರು 1.5 ಲಕ್ಷ ಮೌಲ್ಯದ ಹೂ ಸೇರಿದಂತೆ ಇತರೇ ವಸ್ತುಗಳು ನಾಶವಾಗಿವೆ ಎನ್ನಲಾಗುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News