ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸಾವು
Update: 2019-02-27 22:43 IST
ಮೈಸೂರು,ಫೆ.27: ಅಪರಿಚಿತ ವಾಹನ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಮೃತರನ್ನು ಮಂಡ್ಯದ ಪಾಲಳ್ಳಿ ನಿವಾಸಿ ರಘು (22) ಎಂದು ಗುರುತಿಸಲಾಗಿದೆ. ಇವರು ಮೈಸೂರು ದೇವರಾಜ ಮಾರುಕಟ್ಟೆಯಲ್ಲಿ ಹೂ ವ್ಯಾಪಾರಿಯಾಗಿದ್ದರು. ನಿನ್ನೆ ತಡರಾತ್ರಿ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿ ಅಪರಿಚಿತ ವಾಹನ ಢಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಎನ್.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.