ಮಾಣಿ: ಕಾರಿಗೆ ಲಾರಿ ಢಿಕ್ಕಿ ಇಬ್ಬರಿಗೆ ಗಾಯ
Update: 2019-02-27 23:09 IST
ಬಂಟ್ವಾಳ, ಫೆ. 27: ಇಕೋಮೆಟ್ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿನಲ್ಲಿದ್ದ ಮಹಿಳೆ ಸಹಿತ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲದ ಬುಡೋಳಿ ಎಂಬಲ್ಲಿ ಬುಧವಾರ ನಡೆದಿದೆ.
ಕಾರಿನಲ್ಲಿದ್ದ ಮಂಗಳೂರಿನ ಕಾಟಿಪಳ್ಳ ನಿವಾಸಿ ಖೈರುನ್ನೀಸಾ ಗಾಯಗೊಂಡವರು ಎಂದು ತಿಳಿದುಬಂದಿದೆ.
ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಹಂಚನ್ನು ಒತ್ತೊಯ್ದು ಬರುತ್ತಿದ್ದ ಲಾರಿಯು ಬುಡೋಳಿಯ ವಿಸ್ಡಂ ಶಾಲೆಯ ಸಮೀಪ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯರು ಅಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ಬುಡೋಳಿ ಹೆದ್ದಾರಿಯಲ್ಲಿ ಕೆಲ ಸಮಯ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.