×
Ad

ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ: ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ ದಿನಾಂಕ ಮುಂದೂಡಿಕೆ

Update: 2019-02-28 17:42 IST

ಶಿವಮೊಗ್ಗ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿ ರಸ್ತೆ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಲಾಗಿದ್ದು, ಮಾರ್ಚ್ 19 ರಿಂದ ಒಂದು ತಿಂಗಳ ಕಾಲ ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.

ದುರಸ್ತಿ ಹಿನ್ನೆಲೆಯಲ್ಲಿ ಈ ಹಿಂದೆ ಮಾರ್ಚ್ 1ರಿಂದ 31ರವರೆಗೆ ಆಗುಂಬೆ ಘಾಟಿ ರಸ್ತೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದರು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾರ್ಚ್ 19 ರಿಂದ ದುರಸ್ತಿ ಕಾರ್ಯವನ್ನು ಆರಂಭಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಅವರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News