ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ

Update: 2019-02-28 17:00 GMT

ಬೆಂಗಳೂರು, ಫೆ.28: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಅತಿ ಹೆಚ್ಚಿನ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ರಿಯಾಯಿತಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. 2018-19ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾ.1 ರಿಂದ ಪ್ರಾರಂಭವಾಗಿ ಮಾ.18ಕ್ಕೆ ಮುಕ್ತಾಯವಾಗಲಿದ್ದು, ವಿದ್ಯಾರ್ಥಿಗಳ ವಿದ್ಯಾರ್ಥಿ ರಿಯಾಯಿತಿ ಪಾಸಿನಲ್ಲಿ ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಆದರೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ 2018-19ನೇ ಸಾಲಿನ ವಿದ್ಯಾರ್ಥಿ ಸ್ಮಾರ್ಟ್‌ಕಾರ್ಡ್ ಬಸ್ ಪಾಸ್ ಅಥವಾ ಪ್ರವೇಶ ಪತ್ರದ (ಅಡ್ಮೀಷನ್ ಟಿಕೇಟ್) ಆಧಾರದ ಮೇಲೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News