ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ 34,685 ಮಂದಿ ವಿದ್ಯಾರ್ಥಿಗಳು

Update: 2019-02-28 17:20 GMT

ಮೈಸೂರು,ಫೆ.28: ರಾಜ್ಯದಲ್ಲಿ ಮಾ.1ರಿಂದ  ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷೆ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಈ ನಡುವೆ ಮೈಸೂರು ಜಿಲ್ಲೆಯಲ್ಲಿ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು, 34,685 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ನಗರದಲ್ಲಿ 26 ಪರೀಕ್ಷಾ ಕೇಂದ್ರ ಹಾಗೂ ಗ್ರಾಮೀಣ ಭಾಗದಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪಾರದರ್ಶಕ, ದೋಷರಹಿತ, ಶಾಂತಿ, ಸುವ್ಯವಸ್ಥಿತ ಪರೀಕ್ಷೆಗೆ ಸರ್ವ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಕಲಾ ವಿಭಾಗದಲ್ಲಿ 9671, ವಾಣಿಜ್ಯ ವಿಭಾಗದಲ್ಲಿ 12,932, ವಿಜ್ಞಾನ ವಿಭಾಗದಲ್ಲಿ 12,082 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಳೆದ ಸಾಲಿನಲ್ಲಿ 17ನೇ ಸ್ಥಾನ ಪಡೆದಿದ್ದ ಮೈಸೂರು, ಈ ಸಾಲಿನಲ್ಲಿ 10 ನೇ ಸ್ಥಾನ ಪಡೆಯುವ ನಿರೀಕ್ಷೆ ಹೊಂದಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News