ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪ: ಓರ್ವನ ಬಂಧನ
Update: 2019-03-01 18:36 IST
ಚಾಮರಾಜನಗರ: ವಿಶ್ವ ವಿಖ್ಯಾತ ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪದ ಮೇರೆಗೆ ಓರ್ವನನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದು, ಮತ್ತೊಬ್ಬ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬಂಡೀಪುರ ಅಭಯಾರಣ್ಯ ವಾಪ್ತಿಯ ಗೋಪಾಲಸ್ವಾಮಿ ಬೆಟ್ಟದ ಬಳಿಯ ಕಳ್ಳಿಪುರದ ಅರುಣ್ ಕುಮಾರ್ ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಗೋಪಾಲಸ್ವಾಮಿ ಬೆಟ್ಟದ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಕಳ್ಳೀಪುರದ ಅರುಣ್ ಕುಮಾರ್ ನನ್ನು ಬಂಧಿಸಿದ್ದು, ಈತನ ಮೇಲೆ ಕಾಡಿಗೆ ಬೆಂಕಿ ಹಾಕಿದ ಪ್ರಕರಣ ದಾಖಲು ಮಾಡಲಾಗಿದ್ದು, ಅರಣ್ಯ ಮತ್ತು ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.