×
Ad

ಯಡಿಯೂರಪ್ಪಗೆ ನಾಚಿಕೆ ಆಗಬೇಕು: ಈಶ್ವರ್ ಖಂಡ್ರೆ

Update: 2019-03-01 18:57 IST

ಬೆಂಗಳೂರು, ಮಾ.1: ಸೇನಾ ದಾಳಿಯನ್ನಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ನಾಚಿಕೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

ಶುಕ್ರವಾರ ದೇವರಾಜ ಅರಸು ಭವನದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಆಯೋಜಿಸಿದ್ದ ಬೃಹತ್ ಕಾರ್ಮಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೇನೆಯ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಜೊತೆಗೆ ಪಕ್ಷಭೇದ ಮರೆತು ಎಲ್ಲರೂ ಸೈನಿರಿಗೆ ನೈತಿಕ ಬೆಂಬಲ ನೀಡುತ್ತಿದ್ದಾರೆ.

ಆದರೆ, ಬಿಜೆಪಿ ನಾಯಕರು ಸೇನಾ ದಾಳಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿರುವುದು ದುರದೃಷ್ಟಕರ ಎಂದು ವಿಷಾದಿಸಿದರು.
ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಸಾಧನೆ ಅಪಾರ ಮಾತ್ರವಲ್ಲದೆ, ಹತ್ತಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಯಶಸ್ಸು ಕಂಡಿದೆ. ಆದರೆ, ಬಿಜೆಪಿ ಈ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ಆದರೂ, ಅವರು ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರ ವಹಿಸದಿದ್ದರೆ, ಪುನಃ ಈ ದೇಶದ ಆಡಳಿತ ಕೋಮುವಾದಿಗಳ ಕೈ ಸೇರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News