ಗಡಿಯಲ್ಲಿ ಮುಂದುವರಿದ ಶೆಲ್, ಗುಂಡಿನ ದಾಳಿ: ಮಹಿಳೆ ಸಾವು, ಯೋಧನಿಗೆ ಗಾಯ

Update: 2019-03-01 15:43 GMT

ಜಮ್ಮು, ಮಾ. 1: ಜಮ್ಮು ಹಾಗೂ ಕಾಶ್ಮೀರದ ಪೂಂಛ್ ಹಾಗೂ ರಾಜೌರಿ ಜಿಲ್ಲೆಗಳ ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯ ಶೆಲ್ ದಾಳಿಗೆ 27 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಹಾಗೂ ಯೋಧರೋರ್ವರು ಗಾಯಗೊಂಡಿದ್ದಾರೆ. ಮೃತಪಟ್ಟ ಮಹಿಳೆಯನ್ನು ಅಮಿನಾ ಅಖ್ತರ್ ಎಂದು ಗುರುತಿಸಲಾಗಿದೆ.

ಅಖ್ತರ್ ಛಾಜಾಲ ಗ್ರಾಮದಲ್ಲಿ ದನಗಳನ್ನು ಮೇಯಿಸುತ್ತಿದ್ದ ಸಂದರ್ಭ ಮೋರ್ಟಾರ್ ಶೆಲ್ ಸ್ಫೋಟಗೊಂಡಿದೆ. ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೂಂಛ್‌ನ ಉಪ ಆಯುಕ್ತ ಲೆ. ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ 7ನೇ ದಿನವಾದ ಶುಕ್ರವಾರ ಕೂಡ ಪಾಕಿಸ್ತಾನ ಶೇಲ್ ಹಾಗೂ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತ ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ತಿಳಿಸಿದ್ದಾರೆ.

ಪುಲ್ವಾಮದಲ್ಲಿ ಫೆ. 14ರಂದು ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಏರ್ಪಟ್ಟ ನಡುವೆ ಪಾಕಿಸ್ತಾನ ಅಪ್ರಚೋದಿತವಾಗಿ ಶೆಲ್ ಹಾಗೂ ಗುಂಡಿನ ದಾಳಿ ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News