×
Ad

ಶಕ್ತಿ ವಸತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Update: 2019-03-01 22:40 IST

ಮಂಗಳೂರು, ಮಾ.1: ಶಕ್ತಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಶಕ್ತಿನಗರದ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಕ್ ಜ್ಯೋತಿ ಬೆಳಗಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿದರು.

ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕಿಟ್ಟು, ಉತ್ತಮ ವಿವರಣೆ ಒದಗಿಸಿದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಶಾಲಾ ಪ್ರಾಚಾರ್ಯ ವಿದ್ಯಾ ಕಾಮತ್ ಜಿ. ಸ್ವಾಗತಿಸಿದರು. ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮಾಬಾನು, ಶಕ್ತಿ ಪಿಯು ಕಾಲೇಜಿನ ಪ್ರಾಚಾರ್ಯ ಪ್ರಬಾಕರ ಜಿ.ಎಸ್, ಪ್ರಧಾನ ಸಲಹೆಗಾರ ರಮೇಶ್ ಕೆ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News