ದೇಶದ ಭದ್ರತೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು: ಸಿದ್ದರಾಮಯ್ಯ
ಮೈಸೂರು,ಮಾ.1:ದೇಶದ ಭದ್ರತೆಯ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಆಗಮಸಿದ ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸೇನಾಕಾರ್ಯಚರಣೆ ವಿಚಾರವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಆ ರೀತಿಯಲ್ಲಿ ಹೇಳುವುದಿಲ್ಲ, ಆದರೆ ದೇಶದ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದ ಅವರು, ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇತ್ತೀಚಿಗೆ ಯಡಿಯೂರಪ್ಪ ಅವರ ಮಾತು ಕೇಳಿದರೆ ಈ ರೀತಿಯ ಅನುಮಾನ ಮೂಡುವುದು ಸಹಜ. ಅವರು ಮುಖ್ಯಮಂತ್ರಿಯಾಗಿದ್ದವರು. ಈ ರೀತಿ ಮಾತನಾಡಬಾರದು, ಯಡಿಯೂರಪ್ಪ ಹೇಳಿಕೆಗೆ ಪಾಕಿಸ್ತಾನದವರು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ನಾನು ದೇಶದ ಭದ್ರತೆ ದೃಷ್ಟಿಯಿಂದ ರಾಜಕೀಯ ಮಾತನಾಡುವುದಿಲ್ಲ. ಯೋದರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ದೇಶ ರಕ್ಷಣೆ ಮಾಡುತ್ತಾರೆ. ದೇಶದ ಜನರ ರಕ್ಷಣೆ ಮುಖ್ಯ ಹಾಗು ಯೋಧರ ರಕ್ಷಣೆಯೂ ಮುಖ್ಯ ಎಂದು ಹೇಳಿದರು.