ವಸತಿ ಶಾಲೆಯ ಆಹಾರ ಪದಾರ್ಥಗಳ ಕಳ್ಳ ಸಾಗಾಟ: ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಪ್ರಾಂಶುಪಾಲ

Update: 2019-03-02 05:50 GMT

ಕೋಲಾರ, ಮಾ.2: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವಸತಿ ಶಾಲೆಯ ಪ್ರಾಂಶುಪಾಲ ಸಹಿತ ಮೂವರು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಘಟನೆ ಮಾಲೂರಿನಲ್ಲಿ ನಡೆದಿದೆ.

ಮಾಲೂರು ತಾಲೂಕಿನ ರಾಜೇನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಪ್ರಾಂಶುಪಾಲ ಮಂಜುನಾಥ್ ಆರೋಪಿಯಾಗಿದ್ದಾನೆ.

ಮಂಜುನಾಥ್ ಇನ್ನಿಬ್ಬರು ಆರೋಪಿಗಳೊಂದಿಗೆ ಸೇರಿ ವಸತಿ ಶಾಲೆಯ ಆಹಾರ ಪದಾರ್ಥಗಳನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ಸಂದರ್ಭ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಲಾಗಿದೆ.

ಆರೋಪಿಗಳನ್ನು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಮಾಸ್ತಿ ಠಾಣೆಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆಹಾರ ಪದಾರ್ಥಗಳನ್ನು, ಅಕ್ರಮ ಸಾಗಾಟಕ್ಕೆ ಬಳಸಿದ ಟಾಟಾ ಏಸ್ ವಾಹನ  ಮತ್ತು ಆಹಾರ ಸಾಮಗ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಮಾಸ್ತಿ ಠಾಣೆಯಲ್ಲಿ ದೂರು ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News