ಮಾ.3 ರಂದು ಮುಖ್ಯಮಂತ್ರಿ ಶಿವಮೊಗ್ಗ ಜಿಲ್ಲಾ ಪ್ರವಾಸ

Update: 2019-03-02 13:26 GMT

ಶಿವಮೊಗ್ಗ, ಮಾ.2: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾರ್ಚ್ 3ರಂದು ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 9.15ಕ್ಕೆ ತೀರ್ಥಹಳ್ಳಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಿರ್ಮಿಸಿರುವ ನೂತನ ಸಮುದಾಯ ಭವನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸುವರು. 10.30ಕ್ಕೆ ತೀಥಹಳ್ಳಿಯಿಂದ ಹೊರಟು 10.45ಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ `ಕೃಷಿ ಸಾಲ ಋಣಮುಕ್ತ’ ಪ್ರಮಾಣ ಪತ್ರ ವಿತರಣೆ, ಬಡವರ ಬಂಧು, ಕಾಯಕ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1.30ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News