ವಾದ್ರಾ ಬಂಧನದ ವಿರುದ್ಧ ಮಧ್ಯಂತರ ತಡೆಯಾಜ್ಞೆ ಮಾ.19ರವರೆಗೆ ವಿಸ್ತರಣೆ
Update: 2019-03-02 19:41 IST
ಹೊಸದಿಲ್ಲಿ,ಮಾ.2: ಜಾರಿ ನಿರ್ದೇಶನಾಲಯ(ಈ.ಡಿ)ವು ದಾಖಲಿಸಿರುವ ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಬಂಧನದ ವಿರುದ್ಧ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಮಾ.9ರವರೆಗೆ ವಿಸ್ತರಿಸಿ ದಿಲ್ಲಿಯ ವಿಶೇಷ ನ್ಯಾಯಾಲಯವು ಶನಿವಾರ ಆದೇಶಿಸಿದೆ.
ಲಂಡನ್‌ನಲ್ಲಿ 1.9 ಮಿಲಿಯನ್ ಬ್ರಿಟಿಷ್ ಪೌಂಡ್ ವೌಲ್ಯದ ಆಸ್ತಿಯನ್ನು ಹೊಂದಿರುವ ವಾದ್ರಾ ಅದರ ಖರೀದಿ ವೇಳೆೆ ಅಕ್ರಮ ಹಣ ವಹಿವಾಟು ನಡೆಸಿದ್ದರು ಎಂದು ಈ.ಡಿ.ಆರೋಪಿಸಿದೆ.