ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜನಸಂಪರ್ಕ ಅಭಿಯಾನಕ್ಕೆ ಚಾಲನೆ
ಮಂಗಳೂರು, ಮಾ. 2: ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮೈಸೂರು ವಿಭಾಗದ ಜನಸಂಪರ್ಕ ಅಭಿಯಾನದ ಉಸ್ತುವಾರಿ ಎನ್.ಸಂಪಂಗಿ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜನಸಂಪರ್ಕ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ-ಮನೆಗೆ ತೆರಳಿ ಜನರನ್ನು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ರಾಜ್ಯ ಸರಕಾರದ ಸಾಧನೆಗಳನ್ನು ವಿವರಿಸಿ ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು ಎಂದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ಗುರುಪಾದ ಸ್ವಾಮಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವ ರಮಾನಾಥ ರೈ ಮಾತನಾಡಿದರು.
ಸಭೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಮುಖಂಡರಾದ ಜಿ.ಎ ಬಾವ, ಧನಂಜಯ ಅಡ್ಪಂಗಾಯ, ಕಳ್ಳಿಗೆ ತಾರಾನಾಥ ಶೆಟ್ಟಿ, ಮಮತಾ ಗಟ್ಟಿ, ನವೀನ್ ಡಿಸೋಜ, ಪುರುಷೋತ್ತಮ ಚಿತ್ರಾಪುರ, ಶಾಲೆಟ್ ಪಿಂಟೋ, ಮಿಥುನ್ ರೈ, ಅಶ್ರಫ್ ಸೇವಾದಳ, ಶೇಖರ್ ಕುಕ್ಕೇಡಿ, ಎನ್.ಎಸ್. ಕರೀಂ, ಅಬ್ದುಲ್ಲಾ ಬಿನ್ನು, ಮಾಧವ ಮಾವೆ, ಸಂತೋಷ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್, ಯುವ ಹಾಗೂ ಮಹಿಳಾ ಕಾಂಗ್ರೆಸ್ ಮುಖಂಡರು,ಜಿಪಂ, ತಾಪಂ, ಸದಸ್ಯರು, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು, ಎಪಿಎಸಿ, ಮನಪಾ ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ಶಾಹುಲ್ ಹಮೀದ್ ವಂದಿಸಿದರು.