ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್
Update: 2019-03-02 20:24 IST
ಬೆಂಗಳೂರು, ಮಾ.2: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಹಾಗೂ ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಲ್ಲಿ ಸ್ಪರ್ಧೆಸುತ್ತಾರೆಂಬುದು ಖಚಿತವಾಗಿಲ್ಲ. ಈ ಬಗ್ಗೆ ಪಕ್ಷದ ಮುಖ್ಯಸ್ಥರು ತೀರ್ಮಾನ ಕೈಗೊಳ್ಳಲಿದ್ದಾರೆ. ಪಕ್ಷದ ಕಾರ್ಯಕರ್ತರ ಅಭಿಮಾನ ಹಾಗೂ ಒತ್ತಾಯದ ಮೇರೆಗೆ ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.