ಕೊಕೇನ್ ಮಾರಾಟ: ವಿದೇಶಿ ಪ್ರಜೆ ಸೆರೆ, 3 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

Update: 2019-03-02 16:06 GMT

ಬೆಂಗಳೂರು, ಮಾ.2: ಕೊಕೇನ್, ಎಂಡಿಎಂಎ ಇನ್ನಿತರ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯ ಪ್ರಜೆಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು 3 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ನೈಜಿರಿಯಾ ದೇಶದ ಜೋಸೆಫ್ ಬೆಂಜಮಿನ್ (29) ಬಂಧಿತ ಆರೋಪಿ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಆರೋಪಿಯು ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಐಟಿ-ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿಯು ವ್ಯಾಪಾರಿ ವೀಸಾದಲ್ಲಿ ದೇಶಕ್ಕೆ ಬಂದಿದ್ದು, ಪಾಸ್‌ಪೋರ್ಟ್, ವೀಸಾ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ. ಟಿಸಿ ಪಾಳ್ಯದಿಂದ ಕಾವೇರಿ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದು, ಖಚಿತ ಮಾದರಿಯಾಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬಂಧಿತನಿಂದ 3 ಲಕ್ಷ ಮೌಲ್ಯದ 20 ಗ್ರಾಂ ಕೊಕೇನ್, 9 ಗ್ರಾಂ ಎಂಡಿಎಂಎ, 36 ಮಾದಕ ಮಾತ್ರೆಗಳು, ಬೈಕ್, ಮೊಬೈಲ್‌ಗಳನ್ನು ಜಪ್ತಿ, ಇಲ್ಲಿನ ಕೆಆರ್‌ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News