ವಸ್ತು ಪ್ರದರ್ಶನಕ್ಕೆ ಉಸ್ತುವಾರಿ ಸಚಿವೆ ಭೇಟಿ
Update: 2019-03-02 21:49 IST
ಉಡುಪಿ, ಮಾ.2: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ರಾಜ್ಯ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತು ಪ್ರದರ್ಶನಕ್ಕೆ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ. ಜಯಮಾಲಾ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ವಾರ್ತಾಧಿಕಾರಿ ಖಾದರ್ ಶಾ ಜೊತೆಗಿದ್ದರು.