ವೇಶ್ಯಾವಾಟಿಕೆ: ಇಬ್ಬರು ಆರೋಪಿಗಳ ಸೆರೆ
ಮಂಗಳೂರು, ಮಾ.2: ಅಶೋಕ ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಹಿಳೆ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉರ್ವ ನಿವಾಸಿ ಅರುಂಧತಿ(40), ಛತ್ತೀಸಗಡದ ರವಿಕುಮಾರ್(41) ಬಂಧಿತ ಆರೋಪಿಗಳು. ನೊಂದ ಇಬ್ಬರು ಯುವತಿಯರನ್ನು ರಕ್ಷಿಸಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ.
ವೇಶ್ಯಾವಾಟಿಕೆಯನ್ನು ದಂಧೆಯಾಗಿಸಿಕೊಂಡ ಅರುಂಧತಿ ಗ್ರಾಹಕರನ್ನು ಒಟ್ಟು ಸೇರಿಸಿದರೆ, ರವಿಕುಮಾರ್ ಆಕೆಗೆ ಸಹಕಾರ ನೀಡುತ್ತಿದ್ದ. ಈ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ಮಾಡಿ, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ ಮೂರು ಮೊಬೈಲ್ ಫೋನ್, 6,400 ರೂ.ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳ ಸಹಿತ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಉರ್ವ ಇನ್‌ಸ್ಪೆಕ್ಟರ್ ಕೆ.ಎಂ. ಶರ್ೀ, ಎಸ್‌ಐ ಕಬ್ಬಳ್‌ರಾಜ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.