ಮಾ.4ರಂದು ರಾಜ್ಯ ಮಟ್ಟದ ಅಲ್ಪಸಂಖ್ಯಾತರ ಐಕ್ಯತಾ ಸಮಾವೇಶ
Update: 2019-03-02 22:06 IST
ಬೆಂಗಳೂರು, ಮಾ.2: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದಿಂದ ರಾಜ್ಯಮಟ್ಟದ ಐಕ್ಯತಾ ಸಮಾವೇಶವನ್ನು ಮಾ.4ರಂದು ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‌ನಲ್ಲಿ ಆಯೋಜಿಸಲಾಗಿದೆ.
ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಭಾಗದ ಜಿಲ್ಲಾಧ್ಯಕ್ಷ ಇರ್ಷಾದ್ ಅಹಮ್ಮದ್ ಶೇಖ್, ಜಾತ್ಯತೀತ ನವ ಕರ್ನಾಟಕದ ಆಶಯದೊಂದಿಗೆ ಎಲ್ಲ ವರ್ಗದ ಹಾಗೂ ಸಮಾಜದ ಅಭಿವೃದ್ಧಿ ಸದುದ್ದೇಶಗಳೊಂದಿಗೆ ಸಮಾವೇಶವನ್ನು ಏರ್ಪಡಿಸಲಾಗಿದೆ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮಾವೇಶವನ್ನು ಉದ್ಘಾಟಿಸಲಿದ್ದು, ಎಐಸಿಸಿಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನದೀಮ್ ಜಾವಿದ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.