ಕಾಡ್ಗಿಚ್ಚು ತಡೆಗೆ ಅರಣ್ಯ ಕಾಯ್ದೆಗೆ ತಿದ್ದುಪಡಿ: ಸಚಿವ ಸತೀಶ್ ಜಾರಕಿಹೊಳಿ

Update: 2019-03-02 16:43 GMT

ಬೆಳಗಾವಿ, ಮಾ. 2: ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ದೃಷ್ಟಿಯಿಂದ ಅರಣ್ಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಂಡೀಪುರ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಗಟ್ಟಲು ಕಾನೂನು ಬಿಗಿಗೊಳಿಸಬೇಕಿದೆ ಎಂದು ಹೇಳಿದರು.

ಕಾಡ್ಗಿಚ್ಚು ತಡೆಯಲು ಹೊಗೆ ಪತ್ತೆ ಮಾಡುವ ಉಪಕರಣಗಳು ಸೇರಿದಂತೆ ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಕಾಡ್ಗಿಚ್ಚಿನಿಂದ ಸ್ವಲ್ಪಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಊಹಿಸಿದಷ್ಟು ಹಾನಿಯಾಗಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

ಮುಂಗಾರು ಆರಂಭವಾದ ನಂತರ ಪುನಃ ಕಾಡಿನಲ್ಲಿ ಹಸಿರು ಚಿಗುರಲಿದೆ. ಬಂಡೀಪುರ ಕಾಡ್ಗಿಚ್ಚಿನಲ್ಲಿ ಯಾವುದೇ ಪ್ರಾಣಿಗಳು ಮೃತಪಟ್ಟಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಮೃತ ಪ್ರಾಣಿಗಳ ಫೋಟೊಗಳು ಕ್ಯಾಲಿಫೋರ್ನಿಯಾ ಅರಣ್ಯಗಳದ್ದು ಎಂದು ಸತೀಶ್ ಜಾರಕಿಹೊಳಿ ಇದೇ ವೇಳೆ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News