ಸಿಸಿಬಿ ಪೊಲೀಸರ ದಾಳಿ: ಜೂಜಾಡುತ್ತಿದ್ದ 24 ಮಂದಿ ಸೆರೆ

Update: 2019-03-02 17:03 GMT

ಬೆಂಗಳೂರು, ಮಾ.2: ಕುಮಾರಸ್ವಾಮಿ ಲೇಔಟ್‌ನ ಸಂತೋಷ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್‌ನಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟವಾಡುತ್ತಿದ್ದ ಆರೋದಪಡಿ 24 ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1 ಲಕ್ಷ 3 ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಜೂಜಾಟವಾಡುತ್ತಿದ್ದ ಖಚಿತ ಮಾಹಿತಿಯಾಧರಿಸಿ ಶುಕ್ರವಾರ ರಾತ್ರಿ ದಾಳಿ ನಡೆಸಿ ಬಂಧಿಸಲಾಗಿದ್ದು, ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News