ಕೆಕೆ ಗೆಸ್ಟ್ ಹೌಸ್ ನಲ್ಲಿ ಸಮನ್ವಯ ಸಮಿತಿ ಸಭೆ ಆರಂಭ

Update: 2019-03-04 05:55 GMT

ಬೆಂಗಳೂರು, ಮಾ.4: ಕಾಂಗ್ರೆಸ್ ಮತ್ತು ಜೆಡಿಎಸ್  ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಸಭೆ ಕೆ.ಕೆ. ಗೆಸ್ಟ್ ಹೌಸ್ ನಲ್ಲಿ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ , ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್,  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ  ಭಾಗವಹಿಸಿದ್ದಾರೆ.

ಸಭೆಯಲ್ಲಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ವಿಚಾರ ಚರ್ಚೆಗೆ ಬಂದಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಸಭೆ ಹೆಚ್ಚಿನ ಮಹತ್ವ ಪಡೆದಿದೆ. ಸೀಟು ಹಂಚಿಕೆ, ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News