ಸಿಕ್ಕಿಂ: ಲೋಕಸಭಾ ಚುನಾವಣಾ ಕಣಕ್ಕೆ ಬೈಚುಂಗ್ ಭುಟಿಯಾರ ಪಕ್ಷ

Update: 2019-03-04 13:21 GMT

 ಗ್ಯಾಂಗ್ಟಕ್, ಮಾ.4: ಖ್ಯಾತ ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾರ ‘ಹಮರೊ ಸಿಕ್ಕಿಂ ಪಾರ್ಟಿ’(ಎಚ್‌ಎಸ್‌ಪಿ)ಯು ಸಿಕ್ಕಿಂನ ವಿಧಾನಸಭೆಯ ಎಲ್ಲಾ 32 ಸ್ಥಾನಗಳಿಗೆ ಹಾಗೂ ಏಕೈಕ ಸಂಸತ್ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ.

  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಭುಟಿಯಾ , ‘ನಮ್ಮ ಸಿಕ್ಕಿಂ, ನವ ಸಿಕ್ಕಿಂ’ ಎಂಬ ಘೋಷ ವಾಕ್ಯದೊಂದಿಗೆ ತಮ್ಮ ಪಕ್ಷ ಚುನಾವಣಾ ಪ್ರಚಾರ ಕಾರ್ಯ ನಡೆಸಲಿದೆ ಎಂದು ತಿಳಿಸಿದರು. ಆಡಳಿತಾರೂಢ ಸಿಕ್ಕಿಂ ಡೆಮೊಕ್ರಾಟಿಕ್ ಫ್ರಂಟ್(ಎಸ್‌ಡಿಎಫ್) ಪಕ್ಷದ ವಿರುದ್ಧ ನಡೆಯುವ ಹೋರಾಟದಲ್ಲಿ ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿದ ಅವರು, ಈ ಕುರಿತು ಶೀಘ್ರ ನಿರ್ಧರಿಸಲಾಗುವುದು ಎಂದರು. ಆದರೆ ಕ್ರಿಮಿನಲ್ ಹಿನ್ನೆಲೆ ಇರುವ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಯಾವುದೇ ರಾಷ್ಟ್ರೀಯ ಪಕ್ಷದ ಜೊತೆ ಮೈತ್ರಿ ಸಾಧ್ಯತೆಯನ್ನು ಅವರು ತಳ್ಳಿಹಾಕಿದರು. ತಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಕಾರ್ಯ ಏಕೈಕ ಕಾರ್ಯಸೂಚಿಯಾಗಿರುತ್ತದೆ ಎಂದ ಭುಟಿಯಾ, ಸಿಕ್ಕಿಂನಲ್ಲಿ ಅಧಿಕಾರದಲ್ಲಿರುವ ಪವನ್ ಕುಮಾರ್ ಧರ್ಮ ಮತ್ತು ಜಾತಿಯ ಆಧಾರದಲ್ಲಿ ವಿಭಜನೆಯ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದರು.

2014ರ ಲೋಕಸಭಾ ಚುನಾವಣೆಯಲ್ಲಿ ದಾರ್ಜಿಲಿಂಗ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಭುಟಿಯಾ, 2016ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸಿಲಿಗುರಿಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು. ಕಳೆದ ವರ್ಷ ಟಿಎಂಸಿ ತ್ಯಜಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News