ಕಾರು ಮಾರಾಟ ನೆಪದಲ್ಲಿ ವಂಚನೆ: ಬಂಧನ
Update: 2019-03-04 20:11 IST
ಬೆಂಗಳೂರು, ಮಾ.4: ಕಾರು ಮಾರಾಟ ಮಾಡುವ ನೆಪದಲ್ಲಿ ಹಣ ವಂಚನೆ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಇಲ್ಲಿನ ಬಸವನಗುಡಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ದಿನೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಡಿಮೆ ಬೆಲೆಗೆ ಕಾರುಗಳನ್ನು ಕೊಡಿಸುವುದಾಗಿ ನಂಬಿಸಿ, ಹಣ ಪಡೆದು, ವಂಚಿಸಿದ ಆರೋಪದ ಮೇಲೆ ದಿನೇಶ್ ವಿರುದ್ಧ ಹಲವು ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆ ಬಸವನಗುಡಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸಬೇಕೆಂಬ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಬಗ್ಗೆ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.