‘ಸಿಇಟಿ-2019’ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2019-03-04 14:54 GMT

ಬೆಂಗಳೂರು, ಮಾ.4: ಸಿಇಟಿ-2019ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.28ರ ವರೆಗೆ ಮತ್ತು ಶುಲ್ಕ ಪಾವತಿಸಲು ಮಾ.6ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲು ಕೋರಿರುವ ಹಿನ್ನೆಲೆಯಲ್ಲಿ ಮಾ.5 ರಿಂದ 20ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ತೆರೆಯಲಾಗುತ್ತದೆ.

ಇಲ್ಲಿಯವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಮಾ.5 ರಿಂದ 20ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅರ್ಜಿ ಶುಲ್ಕವನ್ನು ಮಾ.21ರವರೆಗೆ ಪಾವತಿಸಬಹುದಾಗಿದೆ. ಸಿಇಟಿ 2019ಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಥವಾ ಶುಲ್ಕ ಪಾವತಿಸಲು ಇದೇ ಅಂತಿಮ ಹಾಗೂ ಕೊನೆಯ ಅವಕಾಶವಾಗಿದ್ದು, ಮತ್ತೊಮ್ಮೆ ದಿನಾಂಕಗಳನ್ನು ವಿಸ್ತರಿಸಲಾಗುವುದಿಲ್ಲ.

ಅರ್ಜಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಅರ್ಜಿಯಲ್ಲಿ ನಮೂದಿಸಿರುವ ಮಾಹಿತಿಗಳು ತಪ್ಪಾಗಿದ್ದಲ್ಲಿ, ಅದನ್ನು ಮಾ.21(ಸಂಜೆ 5.30ರ ನಂತರ) ರಿಂದ ಮಾ.25(ಸಂಜೆ 5.30ರೊಳಗೆ)ರವರೆಗೆ ಬದಲಾಯಿಸಿಕೊಳ್ಳಬಹುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News