ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಿಖಿಲ್ ಜೆಡಿಎಸ್ ಅಭ್ಯರ್ಥಿ: ಸಚಿವ ಸಾ.ರಾ.ಮಹೇಶ್
Update: 2019-03-04 21:21 IST
ಮೈಸೂರು,ಮಾ.4: ಲೋಕಸಭಾ ಚುನಾವಣೆ ಕುತೂಹಲ ಕೆರಳಿಸಿದ್ದು, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸ್ಥಾನ ಇಲ್ಲ ಎನ್ನಲಾಗಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ನಿಖಿಲ್ ಅಭ್ಯರ್ಥಿಯಾಗಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮತ್ತು ಕೊಡಗು ಲೋಕಸಭಾ ಚುನಾವಣೆಯಲ್ಲೂ ಸಹ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದು, ಎಚ್.ಡಿ.ದೇವೇಗೌಡರಿಗೆ ಲೋಕಸಭಾ ಚುನಾಣೆಯಲ್ಲಿ ಮೈಸೂರು, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರದಿಂದಲೂ ಸಹ ಬೇಡಿಕೆ ಇದೆ ಎಂದು ಹೇಳಿದರು.