ಶಂಕಿತ ಮಂಗನ ಕಾಯಿಲೆಗೆ ತೀರ್ಥಹಳ್ಳಿಯ ವ್ಯಕ್ತಿ ಸಾವು

Update: 2019-03-06 14:43 GMT
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಮಾ. 6: ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಶಂಕಿತ ಮಂಗನ ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. 

ತೀರ್ಥಹಳ್ಳಿ ತಾಲೂಕು ಬೆಟವಾನಿ ಗ್ರಾಮ ಸಮೀಪದ ನಿವಾಸಿ ರಾಜು (48) ಮೃತಪಟ್ಟವರೆಂದು ಗುರುತಿಸಲಾಗಿದೆ. ಜ್ವರದ ಸಮಸ್ಯೆಯಿಂದ ಬಳಲುತ್ತಿದ್ದ ಇವರು, ಕಳೆದ ಸುಮಾರು 20 ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಗುರುವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿಯವರು ಮಾತನಾಡಿ, 'ರಾಜುರವರ ನಿಧನಕ್ಕೆ ಕಾರಣವೇನು ಎಂಬುವುದು ಪ್ರಯೋಗಾಲಯದ ವರದಿ ಬಂದ ನಂತರವಷ್ಟೆ ಸ್ಪಷ್ಟ ತಿಳಿಯಲಿದೆ. ಅವರು ಎನ್.ಆರ್.ಪುರಕ್ಕೆ ತೆರಳಿದ್ದ ವೇಳೆ ಜ್ವರಕ್ಕೆ ತುತ್ತಾಗಿದ್ದರು ಎನ್ನಲಾಗಿದೆ. ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‍ಗೆ ದಾಖಲಾಗಿದ್ದರು' ಎಂದು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News