ಮೊರಾರ್ಜಿ ಶಾಲೆ: ಪ್ರವೇಶಾತಿಗೆ ಅರ್ಜಿ ಆಹ್ವಾನ

Update: 2019-03-06 17:09 GMT

ಮಂಗಳೂರು, ಮಾ.6: ದ.ಕ. ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್. ಅಂಬೇಡ್ಕರ್/ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆಯು ಆಯಾ ತಾಲೂಕು ಕೇಂದ್ರಗಳಲ್ಲಿ ಮಾ.10ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.

ಮಂಗಳೂರಿನ ಕಲ್ಲಬೆಟ್ಟು, ನೀರುಮಾರ್ಗ, ಕಮ್ಮಾಜೆ, ಗುರುಪುರ ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್. ಅಂಬೇಡ್ಕರ್/ ಇಂದಿರಾಗಾಂಧಿ ವಸತಿ ಶಾಲೆಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳು: ಮಂಗಳೂರಿನ ಮಿಲಾಗ್ರೀಸ್ ಕಾಲೇಜು, ಹಂಪನಕಟ್ಟೆ ಹಾಗೂ ಶ್ರೀರಾಮಕೃಷ್ಣ ಶಾಲೆ, ಬಂಟ್ಸ್ ಹಾಸ್ಟೆಲ್, ಮೂಡುಬಿದಿರೆಯ ಜೈನ್ ಪ್ರೌಢಶಾಲೆ, ಬಂಟ್ವಾಳದ ದೀಪಿಕಾ ಪ್ರೌಢಶಾಲೆ, ಮೊಡಂಕಾಪು, ಬೆಳ್ತಂಗಡಿಯ ಸಂತ ತರೇಸಾ ಪ್ರೌಢಶಾಲೆ ಹಾಗೂ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುತ್ತೂರಿನ ಡಾ. ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆ, ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಸಂಬಂಧಿಸಿದ ವಸತಿ ಶಾಲೆಗಳಿಂದ ಪ್ರವೇಶ ಪತ್ರಗಳನ್ನು ಪಡೆದು ಪ್ರವೇಶ ಪರೀಕ್ಷೆಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News