ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನಿಂದ ಎನ್ನೆಸ್ಸೆಸ್ ಶಿಬಿರ
ಮಂಗಳೂರು, ಮಾ.6: ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಉಳಾಯಿಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ಉಳಾಯಿಬೆಟ್ಟು ಗ್ರಾಪಂ ಅಧ್ಯಕ್ಷ ವಸಂತಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ.ಬಿ.ರಹಮತ್ ಅಲಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಕುಂಞಿ, ಬದ್ರಿಯಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ಯೂಸುಫ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಮೋಲಿ ಗ್ರೇಸಿವಾಸ್ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಿಂದ ಶ್ರಮದಾನ, ವಿವಿಧ ಶೈಕ್ಷಣಿಕ ಹಾಗೂ ವ್ಯಕ್ತಿತ್ವ ವಿಕಸನ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಿ ಗ್ರಾಮಸ್ಥರ ಹೆಗ್ಗಳಿಕೆಗೆ ಪಾತ್ರರಾದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ.ಬಿ.ರಹಮತ್ ಅಲಿ ವಹಿಸಿದ್ದರು. ಚೇತನ್ ಕೊಪ್ಪಸಮಾರೋಪ ಭಾಷಣ ಮಾಡಿದರು. ಗ್ರಾಪಂ ಸದಸ್ಯ ಅಬ್ದುಲ್ ರಹಿಮಾನ್, ಬದ್ರಿಯಾ ಪದವಿ ಪೂರ್ವ ಕಾಲೇಜಿನ ನಿವ್ರತ್ತ ಪ್ರಾಚಾರ್ಯ ಡಾ.ಎನ್.ಇಸ್ಮಾಯೀಲ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಯೋಜನಾಧಿಕಾರಿ ಇಸಾಕ್ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಸ್ಟ್ಯಾನಿ ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಅಬ್ದುಲ್ ಆಸಿಫ್ ಹಾಗೂ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನಹೀಮ್ ಶಿಬಿರದ ಯಶಸ್ವಿಗೆ ಸಹಕರಿಸಿದವರಿಗೆ ಕ್ರತಜ್ಞತೆ ಸಲ್ಲಿಸಿದರು. ಕನ್ನಡ ಉಪನ್ಯಾಸಕ ಪ್ರೊ. ರಮೇಶ್ ಕಾರ್ಯಕ್ರಮ ನಿರೂಪಿಸಿದರು