ಪ್ರಧಾನಿ ವಿರುದ್ಧ ಎಫ್‌ಐಆರ್ ದಾಖಲಿಸುವ ಕಾಲ ಬಂದಿದೆ: ರಣದೀಪ್ ಸುರ್ಜೇವಾಲ

Update: 2019-03-06 17:51 GMT

ಹೊಸದಿಲ್ಲಿ, ಮಾ. 6: ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವ ಕಾಲ ಬಂದಿದೆ ಎಂದಿದ್ದಾರೆ.

ರಫೇಲ್ ಒಪ್ಪಂದದ ಭ್ರಷ್ಟಾಚಾರ ಬಹಿರಂಗವಾಗಿದೆ. ಡಸಾಲ್ಟ್ ಏವಿಯೇಶನ್‌ಗೆ ಲಾಭ ಮಾಡಿ ಕೊಡುವ ಮೂಲಕ ಹಾಗೂ ಬೊಕ್ಕಸಕ್ಕೆ ನಷ್ಟ ಉಂಟು ಮಾಡುವ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

‘‘ರಫೇಲ್ ಒಪ್ಪಂದದಲ್ಲಿ ಅಸ್ಪಷ್ಟ ಹಾಗೂ ಸಾಮೂಹಿಕ ಭ್ರಷ್ಟಾಚಾರ ನಡೆದಿರುವುದು ಈಗ ಸ್ಪಟಿಕದಷ್ಟು ಸ್ಪಷ್ಟವಾಗಿದೆ. ಡಸಾಲ್ಟ್ ಏವಿಯೇಶನ್‌ಗೆ ಲಾಭ ಮಾಡಿ ಕೊಡುವ ಹಾಗೂ ಸರಕಾರದ ಬೊಕ್ಕಸಕ್ಕೆ ನಷ್ಟ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ತನ್ನ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ’’ ಎಂದು ಅವರು ಹೇಳಿದ್ದಾರೆ.

ಇದು ಭ್ರಷ್ಟಾಚಾರ ತಡೆ ಕಾಯ್ದೆಯ 1988ರ ಕಲಂ 13 (1)ರ ಅಡಿಯ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ನಿಯಮಗಳ ಅಡಿಯ ಸ್ಪಷ್ಟ ಪ್ರಕರಣ. ಆದುದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರರ ವಿರುದ್ಧ ಪ್ರಥಮ ಮಾಹಿತಿ ದಾಖಲಿಸಲು ಈಗ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News