ವಿ.ಜಿ ಪಾಲ್‌ಗೆ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಪ್ರಶಸ್ತಿ
Update: 2019-03-06 23:03 IST
ಮಂಗಳೂರು, ಮಾ.6: ಕರ್ನಾಟಕ ಸಂಘ ಅಬುಧಾಬಿ ಮತ್ತು ಹೃದಯ ವಾಹಿನಿ ಮಂಗಳೂರು(ರಿ) ಇದರ ಸಂಯುಕ್ತ ಆಶ್ರಯದಲ್ಲಿ ಅಬುದಾಭಿಯ ಇಂಡಿಯನ್ ಸ್ಕೂಲ್ ಸಭಾಂಗಣದಲ್ಲಿ ನಡೆದ 15ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಹಿರಿಯ ರಂಗಕರ್ಮಿ ವಿ.ಜಿ. ಪಾಲ್‌ಗೆ ರಂಗಭೂಮಿಯಲ್ಲಿ ಸಲ್ಲಿಸಿರುವ ಅನುಪಮ ಸೇವೆಗಾಗಿ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
ಸಮ್ಮೇಳನವನ್ನು ಪದ್ಮಶ್ರೀ ಡಾ. ಬಿ. ಆರ್. ಶೆಟ್ಟಿ ಉದ್ಘಾಟಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರ ಭೂಪತಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಂಘ ಅಬುಧಾಬಿಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಹೃದಯವಾಹಿನಿ ಪ್ರತಿಷ್ಠಾನದ ಸಂಸ್ಥಾಪಕ ಕೆ.ಪಿ. ಮಂಜುನಾಥ ಸಾಗರ್, ಚಲನ ಚಿತ್ರರಂಗದ ಕಲಾವಿದ ಮುಖ್ಯಮಂತ್ರಿ ಚಂದ್ರು, ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಸಂಘಟಕ ಬಿ.ಕೆ ಗಣೇಶ್ ರೈ ಉಪಸ್ಥಿತರಿದ್ದರು.