ಮೋದಿ ಗೋ ಬ್ಯಾಕ್: ಕಲಬುರಗಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Update: 2019-03-06 18:01 GMT

ಕಲಬುರಗಿ, ಮಾ.6: ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರಮೋದಿ ಆಗಮಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ‘ಮೋದಿ ಗೋ ಬ್ಯಾಕ್’ ಎಂದು ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ ನೇತೃತ್ವದಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು, ನರೇಂದ್ರಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೈದರಾಬಾದ್-ಕರ್ನಾಟಕ ಭಾಗಕ್ಕೆ ಯಾವುದೇ ಕೊಡುಗೆಯನ್ನು ನೀಡದ ಸುಳ್ಳುಗಾರ ನರೇಂದ್ರಮೋದಿ, ಕಲಬುರಗಿ ಪ್ರವೇಶ ಮಾಡಬಾರದು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News