ಇನ್ನೂ ಎರಡು ತಿಂಗಳು ಕಾಡಲಿದೆ ಸೆಕೆ: ಹವಾಮಾನ ಇಲಾಖೆ ಎಚ್ಚರಿಕೆ

Update: 2019-03-06 18:11 GMT

ಬೆಂಗಳೂರು, ಮಾ 6: ರಾಜ್ಯದಲ್ಲಿ ಶಿವರಾತ್ರಿಯ ಬಳಿಕ ಬಿಸಿಲು ಅಧಿಕವಾಗುತ್ತಿದ್ದು, ಇನ್ನು ಮೂರು ತಿಂಗಳುಗಳ ಕಾಲ ರಾಜ್ಯಾದ್ಯಂತ ಅತಿ ಹೆಚ್ಚು ಬಿಸಿಲು ಕಾಡಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ ಮೂರು ತಿಂಗಳು ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳವಾಗಲಿದ್ದು, ಪರಿಣಾಮ ಸೆಕೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಈ ವರ್ಷ ಅವಧಿಗಿಂತ ಮುನ್ನ ಬೇಸಿಗೆ ಆರಂಭವಾಗಿದೆ. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಅವಧಿಯಲ್ಲಿ ಉಷ್ಣಾಂಶದ ಶೇ.2 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಲಿದೆ ಎಂದು ತಿಳಿಸಿದೆ.

ಉಷ್ಣಾಂಶ ಏರಿಕೆಯಾದ ಹಿನ್ನೆಲೆಯಲ್ಲಿ ಬಿಸಿ ಗಾಳಿ ಬೀಸಲಿದ್ದು, ರಾತ್ರಿ ವೇಳೆಯಲ್ಲಿ ಸೆಕೆ ಪ್ರಮಾಣ ಹೆಚ್ಚಾಗಲಿದೆ. ರಾಜ್ಯಾದ್ಯಂತ ಸರಾಸರಿ ರಾತ್ರಿ ವೇಳೆಯಲ್ಲಿ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಇಲಾಖೆಯ ತಿಳಿಸಿದೆ. ಉತ್ತರ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ 34ರಿಂದ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಕರಾವಳಿ ಭಾಗದಲ್ಲೂ ಉಷ್ಣಾಂಶ ಹೆಚ್ಚಾಗಲಿದೆ ಎಂದು ಇಲಾಖೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News