ವಿಧಾನಸೌಧದಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2019-03-06 18:18 GMT

ಬೆಂಗಳೂರು, ಮಾ.6: ವಿಧಾನಸೌಧ ಪಶ್ಚಿಮ ದ್ವಾರದ ಬಳಿ ದಾಖಲೆ ಇಲ್ಲದ 25.76 ಲಕ್ಷ ರೂ. ಹಣ ಪತ್ತೆಯಾದ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿ ಮೋಹನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಜಾಮೀನು ಅರ್ಜಿ ವಜಾಗೊಳಿಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಮೋಹನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ಪೂರ್ಣಗೊಳಿಸಿದ ನ್ಯಾ. ಬಿ.ಎ ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಕುರಿತ ತೀರ್ಪು ಕಾಯ್ದಿರಿಸುವುದಾಗಿ ಹೇಳಿ ವಿಚಾರಣೆ ಮುಂದೂಡಿತು.

ಪ್ರಕರಣವೇನು: ಸಮಾಜ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ಹೊರಗುತ್ತಿಗೆ ನೌಕರ ಮೋಹನ್ ಬಳಿ ಜ.4ರಂದು ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ದಾಖಲೆ ಇಲ್ಲದ 25.76 ಲಕ್ಷ ರೂ. ನಗದು ಸಿಕ್ಕಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಎಸಿಬಿಗೆ ವರ್ಗಾವಣೆಯಾಗಿತ್ತು. ಪ್ರಕರಣದಲ್ಲಿ ಜಾಮೀನು ಕೋರಿ ಮೋಹನ್ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಜ.18ರಂದು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಮೋಹನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News