ಲೋಕಸಭಾ ಚುನಾವಣೆ: ಕಾಂಗ್ರೆಸ್ ನಿಂದ ಸ್ಪರ್ಧೆಯ ಬಗ್ಗೆ ಪ್ರತಿಕ್ರಿಯಿಸಿದ ಹಾರ್ದಿಕ್ ಪಟೇಲ್

Update: 2019-03-07 11:55 GMT

ಹೊಸದಿಲ್ಲಿ, ಮಾ.7: ಪಾಟಿದಾರ್ ಅನಾಮತ್ ಆಂದೋಲನ ಸಮಿತಿಯ ನಾಯಕ ಹಾರ್ದಿಕ್ ಪಟೇಲ್ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದ್ದು, ಕಾಂಗ್ರೆಸ್ ನಾಯಕರು ಮತ್ತು ಸಹವರ್ತಿಗಳೊಂದಿಗಿನ ಸಮಾಲೋಚನೆಯ ನಂತರ ಹಾರ್ದಿಕ್ ಕಾಂಗ್ರೆಸ್ ಸೇರ್ಪಡೆಯ ದಿನಾಂಕ ಘೋಷಿಸಲಿದ್ದಾರೆ ಎಂದು ವರದಿಯಾಗಿದೆ.

ತಾನು ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂದು ಹಾರ್ದಿಕ್ ಪಟೇಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು indianexpress.com ವರದಿ ಮಾಡಿದೆ.

ಪಟೇಲ್ ಜೊತೆಗೆ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿಯ ಇತರ ಐವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗುವ ನಿರೀಕ್ಷೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News