ಮಾ. 8: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ತರ್ಬಿಯತ್ ಕ್ಯಾಂಪ್

Update: 2019-03-07 11:31 GMT

ಮುಡಿಪು, ಮಾ. 7: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ "ತರ್ಬಿಯತ್ ಕ್ಯಾಂಪ್" ಶುಕ್ರವಾರ ಮಧ್ಯಾಹ್ನ 2:30ಕ್ಕೆ ಎಜ್ಯುಪಾರ್ಕ್ ಮುಡಿಫು ವಿನಲ್ಲಿ ನಡೆಯಲಿದೆ.

ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ಅಧ್ಯಕ್ಷತೆ ವಹಿಸುವರು. ಸಯ್ಯದ್ ಅಶ್ರಫ್ ತಂಙಳ್ ಆದೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೂಟಂಬಾರ ಅಬ್ದುಲ್ ರಹ್ಮಾನ್ ದಾರಿಮಿ ತರಗತಿ ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಾರ್ಯದರ್ಶಿ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News