ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಾ.9 ರಂದು ಮಂಗಳೂರಿಗೆ

Update: 2019-03-07 14:53 GMT

ಬೆಂಗಳೂರು, ಮಾ.7: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರಮೋದಿ ಬುಧವಾರ ಚಾಲನೆ ನೀಡಿದ ಬೆನ್ನಲ್ಲೆ ಕೇಂದ್ರದ ಬಿಜೆಪಿ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್‌ಸಿಂಗ್ ಚೌವ್ಹಾಣ್ ಮಾ.8ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಅವರು, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮಾ.8ರಂದು ಕೋಲಾರದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಾ.9ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು, ಸಂಜೆ ಪ್ರಬುದ್ಧರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News