ಮಣಿಪಾಲ: ಮಾ.8ರಂದು ಜಿಲ್ಲಾ ಸ್ತ್ರೀ ಶಕ್ತಿ ಸಮಾವೇಶ
Update: 2019-03-07 20:27 IST
ಉಡುಪಿ, ಮಾ.7: ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಸಮಾವೇಶವು ಮಾ.8ರಂದು ಬೆಳಗ್ಗೆ 10:30ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.