×
Ad

ಮಾ.8ರಿಂದ 'ನಮ್ಮ ಅಂಗಡಿ' ಉತ್ಪನ್ನಗಳ ಮಾರಾಟ, ಪ್ರದರ್ಶನ ಮೇಳ

Update: 2019-03-07 21:40 IST

ಉಡುಪಿ, ಮಾ.7: ಮಣಿಪಾಲದ ಸ್ಕೂಲ್ ಆಫ್ ಕಮ್ಯುನಿಕೇಷನ್, ಕುಂದಾಪುರದ ಕನ್ಯಾನದ ಸಿಡಬ್ಲುಸಿಯ ಸಹಯೋಗದೊಂದಿಗೆ ಆಯೋಜಿಸುವ ಗ್ರಾಮೀಣ ಪ್ರದೇಶದ ಮಕ್ಕಳು ತಯಾರಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಮೇಳ ‘ನಮ್ಮ ಅಂಗಡಿ’ ಮಾ. 8ರಿಂದ ಮೂರು ದಿನಗಳ ಕಾಲ ಎಸ್‌ಒಸಿಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕಿ ಡಾ.ಪದ್ಮಾರಾಣಿ ತಿಳಿಸಿದ್ದಾರೆ.

ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಡಬ್ಲುಸಿ ಯೋಜನೆ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ನಮ್ಮ ಭೂಮಿಯ ಮಕ್ಕಳು ತಯಾರಿಸಿದ ವಿವಿಧ ವಸ್ತುಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿವೆ ಎಂದರು.

ಮೇಳವನ್ನು ಶುಕ್ರವಾರ ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಡಾ. ಪದ್ಮಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News