ಗಾಂಜಾ ಮಾರಾಟ: ಕೇರಳದ ಯುವಕನ ಬಂಧನ
Update: 2019-03-07 21:50 IST
ಉಡುಪಿ, ಮಾ.7: ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದ ಅಪಾರ್ಟ್‌ಮೆಂಟ್ ಹಿಂಭಾಗ ಸಾರ್ವಜನಿಕ ಮಾರ್ಗದಲ್ಲಿ ಅಕ್ರಮವಾಗಿ ಗಾಂಜಾ ದಾಸ್ತಾನಿಟ್ಟು ಮಾರಾಟಕ್ಕೆ ಯತ್ನಿಸುತಿದ್ದ ಕೇರಳ ಮೂಲದ ಯುವಕನೊಬ್ಬನನ್ನು ಸೆನ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಇಂದು ಬಂಧಿಸಿ ಆತನಿಂದ 2.112 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕೇರಳ ತಿರುವನಂತಪುರ ನಿವಾಸಿ ಜೊನಾಥನ್ ಸ್ಯಾಮುವೆಲ್ (22) ಬಂಧಿತ ಆರೋಪಿಯಾಗಿದ್ದು, ವಶಪಡಿಸಿಕೊಂಡ ಗಾಂಜಾದ ಮೌಲ್ಯ 90,000 ರೂ. ಎಂದು ಅಂದಾಜಿಸಲಾಗಿದೆ. ಅಲ್ಲದೇ ಆತನಿಂದ 10 ಸಾವಿರ ರೂ. ಮೌಲ್ಯದ ಮೊಬೈಲ್ ಪೋನ್‌ನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಎಸ್ಪಿ ನಿಶಾ ಜೇಮ್ಸ್ ನಿರ್ದೇಶನ ಹಾಗೂ ಎಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಸೀತಾರಾಮ ಪಿ. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.