×
Ad

​ಗಾಂಜಾ ಸೇವನೆ: ಇಬ್ಬರು ವಶಕ್ಕೆ

Update: 2019-03-07 22:15 IST

ಮಂಗಳೂರು, ಮಾ.7: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಸ್ಥಳೀಯ ನಿವಾಸಿಗಳಾದ ಮುಹಮ್ಮದ್ ಅಸ್ಗರ್ (22), ಅಬ್ದುಲ್ ನಸೀರ್ (23) ಬಂಧಿತ ಆರೋಪಿಗಳು.

ಎಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಠಾಣಾ ಎಎಸ್ಸೈ ಶ್ಯಾಮ್ ಸುಂದರ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು ನಗರದ ವೆಲೆನ್ಸಿಯಾ ಚರ್ಚ್ ಬಳಿ ಆರೋಪಿಗಳು ಗಾಂಜಾ ಸೇವಿಸಿ ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದರು. ಈ ಹಿನ್ನೆಲೆ ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಎಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News