ಟಿಕೆಟ್ ರಹಿತ ಪ್ರಯಾಣ: 10.51 ಲಕ್ಷ ರೂ.ದಂಡ ವಸೂಲಿ

Update: 2019-03-07 16:56 GMT

ಬೆಂಗಳೂರು, ಮಾ.7: ಕಳೆದ ಜನವರಿಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣಿಸುತ್ತಿದ್ದ 6351 ಪ್ರಯಾಣಿಕರಿಂದ 10.51ಲಕ್ಷ ರೂ.ದಂಡವನ್ನು ವಸೂಲಿ ಮಾಡಲಾಗಿದೆ.

ನಗರದಾದ್ಯಂತ ಸಂಚರಿಸುವ ಬಿಎಂಟಿಸಿ ಬಸ್‌ಗಳಲ್ಲಿ ಒಟ್ಟು 26,086 ಟ್ರಿಪ್‌ಗಳಲ್ಲಿ ತಪಾಸಣೆ ನಡೆಸಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡ ವಸೂಲಿ ಮಾಡಿ, ಸಂಸ್ಥೆಯ ನಿರ್ವಾಹಕರಿಂದ 2,529 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಯಾಣಿಕರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಸುವುದು ಉತ್ತಮ. ಹಾಗೂ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತುಕೊಳ್ಳಬಾರದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News