ದ.ಕ. ಜಿಲ್ಲಾ ರೆಡ್‌ಕ್ರಾಸ್ ಅಧ್ಯಕ್ಷರಾಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ
ಮಂಗಳೂರು, ಮಾ.7: ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳೊಂದಿಗೆ (ಶೇ.82) ಆಡಳಿತ ಸಮಿತಿಗೆ ಆಯ್ಕೆಯಾದ ಸಿಎ ಶಾಂತಾರಾಮ ಶೆಟ್ಟಿ 2019-2022ನೇ ಸಾಲಿನ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.
ರೆಡ್‌ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾ ನೂತನ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ನಡೆಸಲಾಗಿದೆ. ಉಪಾಧ್ಯಕ್ಷರಾಗಿ ಉದ್ಯಮಿ ಬಿ. ನಿತ್ಯಾನಂದ ಶೆಟ್ಟಿ, ಖಜಾಂಚಿಯಾಗಿ ಉದ್ಯಮಿ ಆರ್ಚ್‌ಬಾಲ್ಡ್ ಮಿನೆಜಸ್, ಪ್ರಕೃತಿ ವಿಕೋಪ ನಿರ್ವಹಣೆ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯ ರೆಡ್‌ಕ್ರಾಸ್ ಘಟಕದ ಜಿಲ್ಲೆಯ ಪ್ರತಿನಿಧಿಯಾಗಿ ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿಯ ಸಿಇಒ ಯತೀಶ್ ಬೈಕಂಪಾಡಿ ಆಯ್ಕೆಯಾಗಿದ್ದಾರೆ.
ಆರೋಗ್ಯ ಮತ್ತು ಪ್ರಥಮ ಚಿಕಿತ್ಸಾ ಸಮಿತಿಯ ಅಧ್ಯಕ್ಷರಾಗಿ ನಿಟ್ಟೆ ವಿವಿ ಕುಲಪತಿ ಡಾ.ಸತೀಶ್ ಭಂಡಾರಿ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಸಮಿತಿಯ ಅಧ್ಯಕ್ಷರಾಗಿ ಡಾ. ಯು. ವಿ. ಶೆಣೈ, ಯುವ ರೆಡ್‌ಕ್ರಾಸ್ ಮತ್ತು ಜೂನಿಯರ್ ರೆಡ್‌ಕ್ರಾಸ್ ಸಮಿತಿಯ ಅಧ್ಯಕ್ಷರಾಗಿ ಉಪನ್ಯಾಸಕ ಸಚೇತ್ ಸುವರ್ಣ, ವಿಕಲಚೇತನ ಸಮಿತಿಯ ಅಧ್ಯಕ್ಷರಾಗಿ ಬ್ಯಾಂಕ್ ನಿವೃತ್ತ ಉದ್ಯೋಗಿ ರವೀಂದ್ರನಾಥ, ಸಾರ್ವಜನಿಕ ಸಂಪರ್ಕ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಹಾಗೂ ರೆಡ್‌ಕ್ರಾಸ್ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಯೂಜಿನ್ ರೆಂಟ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭ ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮಾ ಆಡಳಿತ ಮಂಡಳಿಯ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.